ಚೈನ್ನೈ : ಹೃದಯ ಸಂಬಂಧಿ ಕಾಯಿಲೆಗೆ ಸಂಬಂಧಪಟ್ಟಂತೆ ತಮಿಳು ನಟ ರಜನಿಕಾಂತ್ ಅವರು ಸೆಪ್ಟೆಂಬರ್ 30ರಂದು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಚಿಕಿತ್ಸೆ ಪಡೆದುಕೊಂಡ ಬಳಿಕ ಇಂದು ನಟ ರಜನಿಕಾಂತ್ ಅವರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ತಿಳಿದುಬಂದಿದೆ.
ಸೆಪ್ಟೆಂಬರ್ 30ರ ತಡರಾತ್ರಿ ಆಸ್ಪತ್ರೆಗೆ ನಟ ರಜನಿಕಾಂತ್ ದಾಖಲಾಗಿದ್ದರು.ಬಳಿಕ ನುರಿತ ವೈದ್ಯರಿಂದ ಅವರಿಗೆ ಚಿಕಿತ್ಸೆ ನೀಡಲಾಗಿತ್ತು. ಅವರ ರಕ್ತನಾಳದಲ್ಲಿ ಊತ ಕಾಣಿಸಿಕೊಂಡಿತ್ತು. ಅದಕ್ಕೆ ಚಿಕಿತ್ಸೆ ನೀಡಲಾಗಿದೆ. ಹಿರಿಯ ವೈದ್ಯ ಡಾ. ಸಾಯಿ ಸತೀಶ್ ಅವರು ರಜನಿಕಾಂತ್ ಅವರಿಗೆ ಸ್ಟೆಂಟ್ ಹಾಕಿದ್ದಾರೆ. ಅಂದುಕೊಂಡ ರೀತಿಯೇ ಚಿಕಿತ್ಸೆ ಫಲಕಾರಿ ಆಗಿದೆ.
ರಜನಿಕಾಂತ್ ಅವರಿಗೆ ಈಗ 73 ವರ್ಷ ವಯಸ್ಸು. ವಯೋ ಸಹಜವಾಗಿ ಅವರು ಒಂದಷ್ಟು ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಅವರು ದಿಢೀರ್ ಅಂತ ಆಸ್ಪತ್ರೆಗೆ ದಾಖಲಾಗಿದ್ದರಿಂದ ಎಲ್ಲರಿಗೂ ಆತಂಕ ಹೆಚ್ಚಿತ್ತು. ಸದ್ಯ ಕೆಲವು ದಿನಗಳ ಕಾಲ ರಜನಿಕಾಂತ್ ಅವರು ಸಿನಿಮಾದ ಕೆಲಸಗಳಿಗೆ ಬ್ರೇಕ್ ನೀಡಲಿದ್ದಾರೆ. ಸಂಪೂರ್ಣ ಗುಣಮುಖರಾದ ನಂತರವೇ ಅವರು ಸಿನಿಮಾದ ಕೆಲಸಗಳತ್ತ ಮರಳಿದ್ದಾರೆ.