ನವದೆಹಲಿ: ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಮತ್ತು ಪುದುಚೇರಿ ರಾಜ್ಯಗಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ಬೆಳಿಗ್ಗೆ 8 ಗಂಟೆಗೆ ಸರಿಯಾಗಿ ಆರಂಭವಾಗಿದ್ದು, 823 ಕ್ಷೇತ್ರಗಳ ಅಭ್ಯರ್ಥಿಗಳ ಹಣೆಬರಹ ಇಂದು ಮಧ್ಯಾಹ್ನದ ವೇಳೆಗೆ ಬಹುತೇಕ ಸ್ಪಷ್ಟವಾಗಲಿದೆ.
ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಮೊದಲಿಗೆ ಅಂಚೆ ಮತ ಎಣಿಕೆ ನಡೆಯುತ್ತಿದ್ದು, ಬಿಜೆಪಿ 14 ಕ್ಷೇತ್ರಗಳಲ್ಲಿ ಮುನ್ನಡ ಸಾಧಿಸಿದ್ದರೆ, ಟಿಎಂಸಿ 11 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.
ತಮಿಳುನಾಡು ವಿಧಾನಸಭೆ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಎಐಡಿಎಂಕೆ 3 ಕ್ಷೇತ್ರಗಳಲ್ಲಿ, ಡಿಎಂಕೆ 9 ಕ್ಷೇತ್ರಗಳಲ್ಲಿ, ಟಿವಿಕೆ 1 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.
ಅಸ್ಸಾಂ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಬಿಜೆಪಿ 13 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್ 3 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.






