ಬೆಂಗಳೂರು : ತಮಿಳುನಾಡಿನ ಅರಣ್ಯ ಸಚಿವರಾದ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ.
ಈ ಕುರಿತು ಸಿಎಂ ಸಿದ್ದರಾಮಯ್ಯ ಮಾಹಿತಿ ಹಂಚಿಕೊಂಡಿದ್ದು, ತಮಿಳುನಾಡಿನ ಅರಣ್ಯ ಸಚಿವರಾದ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಇಂದು ನನ್ನನ್ನು ಭೇಟಿಯಾಗಿ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ಮತ್ತು ದಕ್ಷಿಣ ರಾಜ್ಯಗಳ ವಿರೋಧಿ ನಿಲುವನ್ನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಕುರಿತು ಚರ್ಚಿಸಿದರು. ಸಚಿವರ ನಿಯೋಗದ ಭೇಟಿಗೂ ಮೊದಲು ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಅವರ ಜೊತೆ ದೂರವಾಣಿ ಮೂಲಕ ಮಾತನಾಡಿ, ಹೋರಾಟದ ಬಗ್ಗೆ ಚರ್ಚಿಸಿದೆ.
ದಕ್ಷಿಣ ರಾಜ್ಯಗಳ ಪ್ರತಿರೋಧಕ್ಕೆ ನನ್ನ ಬೆಂಬಲ ಸದಾ ಇರಲಿದೆ. ರಾಜ್ಯಗಳ ಹಿತಾಸಕ್ತಿಗೆ ವಿರುದ್ಧವಾದ, ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವ, ಸಂವಿಧಾನದ ಒಕ್ಕೂಟ ತತ್ವಕ್ಕೆ ವಿರುದ್ಧವಾದ ಕೇಂದ್ರ ಸರ್ಕಾರದ ಎಲ್ಲಾ ನಡೆಗಳನ್ನೂ ನಾವು ಮುಲಾಜಿಲ್ಲದೆ ಖಂಡಿಸುತ್ತೇವೆ. ಈ ವಿಚಾರದಲ್ಲಿ ತಮಿಳುನಾಡಿನಂತೆ ಕರ್ನಾಟಕ ಕೂಡ ಸಮಾನ ಅಭಿಪ್ರಾಯ ಹೊಂದಿದೆ ಎಂದು ಹೇಳಿದ್ದಾರೆ.
ತಮಿಳುನಾಡಿನ ಅರಣ್ಯ ಸಚಿವರಾದ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಇಂದು ನನ್ನನ್ನು ಭೇಟಿಯಾಗಿ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ಮತ್ತು ದಕ್ಷಿಣ ರಾಜ್ಯಗಳ ವಿರೋಧಿ ನಿಲುವನ್ನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಕುರಿತು ಚರ್ಚಿಸಿದರು.
ಸಚಿವರ ನಿಯೋಗದ ಭೇಟಿಗೂ ಮೊದಲು… pic.twitter.com/fg4DY4jufm
— Siddaramaiah (@siddaramaiah) March 12, 2025