ಬೆಂಗಳೂರು : ಸನಾತನ ಧರ್ಮದ ಕುರಿತು ಅವಹೇಳನಕಾರಿ ಹೇಳಿಕೆ ಸಂಬಂಧಸಿದಂತೆ ತಮಿಳುನಾಡಿನ ಸಚಿವ ಉದಯನಿಧಿ ಸ್ಟ್ಯಾಲಿನ್‌ ಅವರು ಬೆಂಗಳೂರಿನ ಮೆಟ್ರೋಪಾಲಿಟಿನ್‌ ಮ್ಯಾಜಿಸ್ಟ್ರೇಕ್‌ ಕೋರ್ಟ್‌ ಗೆ ಹಾಜರಾಗಿದ್ದಾರೆ.

ಪರಮೇಶ್ ಎಂಬುವರು ಸಲ್ಲಿಸಿದ್ದ ಅರ್ಜಿಯನ್ನು ಆಧರಿಸಿ ನ್ಯಾಯಾಲಯ ಅವರಿಗೆ ನೋಟಿಸ್ ಜಾರಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಉದಯನಿಧಿ ಸ್ಟ್ಯಾಲಿನ್‌ ಅವರು ಇಂದು ಕೋರ್ಟ್‌ ಗೆ ವಿಚಾರಣೆಗೆ ಹಾಜರಾಗಿದ್ದಾರೆ.

ಕಳೆದ ವರ್ಷ ಸೆಪ್ಟೆಂಬರ್ 4ರಂದು ಚೆನ್ನೈನ ತೇನಂಪೇಟೆಯಲ್ಲಿ ನಡೆದಿದ್ದ ಸನಾತನ ಧರ್ಮ ನಿರ್ಮೂಲನಾ ಸಮಾವೇಶದಲ್ಲಿ ಮಾತನಾಡಿದ್ದ ಉದಯನಿಧಿ, ಸನಾತನ ಧರ್ಮ ಡೆಂಗಿ, ಮಲೇರಿಯಾ ಹಾಗೂ ಕೊರೊನಾ ಇದ್ದಂತೆ. ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ಅದು ವಿರುದ್ಧವಾಗಿದೆ. ಅದನ್ನು ನಿರ್ಮೂಲನೆ ಮಾಡಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.

Share.
Exit mobile version