ಮೈಸೂರು : ಮೈಸೂರು ಜಿಲ್ಲೆಯ ಪ್ರವಾಸಕ್ಕೆ ಎಂದು ತಮಿಳುನಾಡು ಮೂಲದ ಕಾಲೇಜು ವಿದ್ಯಾರ್ಥಿಗಳ ತಂಡ ಬಂದು ಆಗಮಿಸಿತ್ತು. ಈ ವೇಳೆ ವಿದ್ಯಾರ್ಥಿ ಒಬ್ಬ ಬಸ್ ಬಾಗಿಲ ಬಳಿ ನಿಂತಾಗ ಡೋರ್ ಲಾಕ್ ಮಾಡದೆ ಇದ್ದಿದ್ದರಿಂದ, ಆಯತಪ್ಪಿ ಕೆಳಗೆ ಬಿದ್ದು ಸಾವನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನಲ್ಲಿ ನಡೆದಿದೆ.
ತಮಿಳುನಾಡು ಮೂಲದ ದೀನಾ ದಯಾಳ್ (21) ಎಂಬ ವಿದ್ಯಾರ್ಥಿ ಮೃತ ದುರ್ದೈವಿ ಎನ್ನಲಾಗಿದೆ. ಬೈಲುಕೊಪ್ಪೆ ಗೋಲ್ಡನ್ ಟೆಂಪಲ್ ವೀಕ್ಷಿಸಲು ಹೋಗುವಾಗ ಈ ಒಂದು ಘಟನೆ ನಡೆದಿದೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಬೈಲುಕುಪ್ಪೆ ಗೋಲ್ಡನ್ ಟೆಂಪಲ್ ನೋಡಲು ತೆರಳುವ ವೇಳೆ ಈ ಘಟನೆ ನಡೆದಿದೆ.
ಬಸ್ ಡೋರ್ ಲಾಕ್ ಆಗದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಆಯತಪ್ಪಿ ಕೆಳಗೆ ಬಿದ್ದಿದ್ದಾನೆ. ಕೆಳಗೆ ಬಿದ್ದ ಪರಿಣಾಮ ಬಲವಾದ ಪೆಟ್ಟು ಬಿದ್ದು ದೀನಾ ದಯಾಳ್ ಸಾವನಪ್ಪಿದ್ದಾನೆ. ಘಟನೆ ಕುರಿತಂತೆ ಬೆಲುಕುಪ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.