ಬೆಂಗಳೂರು : ಇತ್ತೀಚಿಗೆ ಕಾನ್ವೆಂಟ್ ಸ್ಕೂಲ್ ಗಳಲ್ಲಿ ಕ್ಷುಲ್ಲಕ ವಿಚಾರವಾಗಿ ಶಿಕ್ಷಕ ಶಿಕ್ಷಕಿಯರು ಮಕ್ಕಳ ಮೇಲೆ ತೀವ್ರವಾಗಿ ಹಲ್ಲೆ ಮಾಡುತ್ತಿರುವ ಘಟನೆಗಳು ನಡೆದಿದೆ. ಇದೀಗ ಬೆಂಗಳೂರಿನಲ್ಲಿ ಕೇವಲ ಹೋಮವರ್ಕ್ ಮಾಡಿಲ್ಲ ಎಂಬ ಸಣ್ಣ ಕಾರಣಕ್ಕೆ ಬಾಲಕನಿಗೆ ಬಾಸುಂಡೆ ಬರುವಂತೆ ಶಿಕ್ಷಕಿ ಹಲ್ಲೆ ಮಾಡಿರುವ ಘಟನೆ ವರದಿಯಾಗಿದೆ.
ಹೌದು ಹೋಂವರ್ಕ್ ಮಾಡಿಲ್ಲ ಎಂದು ಬಾಲಕನ ಮೇಲೆ ಮನಬಂದಂತೆ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನ ನಂದಿನಿ ಲೇಔಟ್ ನ ವೀಣಾ ವಿದ್ಯಾಸಂಸ್ಥೆಯಲ್ಲಿ ಒಂದು ಘಟನೆ ನಡೆದಿದ್ದು, ಬಾಲಕನಿಗೆ ಶಿಕ್ಷಕಿ ಬಾಸುಂಡೆ ಬರುವಂತೆ ಹೊಡೆದಿದ್ದಾರೆ ಶಾಲಾ ಶಿಕ್ಷಕಿ ವಿರುದ್ಧ ಇದೀಗ ಬಿಇಒಗೆ ಪೋಷಕರು ದೂರು ಸಹ ನೀಡಿದ್ದಾರೆ. ಬೆಂಗಳೂರು ಉತ್ತರ ವಲಯದ ರಾಜಾಜಿನಗರ ಬಿಇಒಗೆ ಬಾಲಕನ ಪೋಷಕರು ಇದೀಗ ದೂರು ಸಲ್ಲಿಸಿದ್ದಾರೆ.
ಈ ಒಂದು ಘಟನೆಗೆ ಸಂಬಂಧಪಟ್ಟಂತೆ ಬಾಲಕನ ಮೇಲೆ ಹಲ್ಲೆ ಮಾಡಿದ ಕೆಸ್ ವಿಚಾರವಾಗಿ ತ್ರೀಮನ್ ಕಮಿಟಿ ಮಾಡಿ ತನಿಖೆ ನಡೆಸುತ್ತೇವೆ ಈ ಕುರಿತು ಕ್ರಮ ತೆಗೆದುಕೊಳ್ಳುತ್ತೇವೆ ಅಂತ ಬಿಇಓ ತಾರಾನಾಥ ಮಾಹಿತಿ ನೀಡಿದ್ದಾರೆ. ಹಲ್ಲೆ ಸಂಬಂಧ ತ್ರಿಮನ್ ಕಮಿಟಿ ಮಾಡಿ ತನಿಖೆ ನಡೆಸಲಾಗುತ್ತದೆ ಶಿಕ್ಷಕಿ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ ಅಂತ ಹೇಳಿದ್ದಾರೆ.








