ಮೈಸೂರು : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೆಳಿಸುವ ಘಟನೆ ನಡೆದಿದ್ದು ಶಾಲೆಯಲ್ಲಿ ಮೂವರು ವಿದ್ಯಾರ್ಥಿನಿಯರಿಗೆ ಕಾಮುಕ ಶಿಕ್ಷಕನೊಬ್ಬ ನಿದ್ರೆ ಮಾತ್ರೆ ನೀಡಿ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ ತಾಲೂಕಿನ ಅಗಸರಹುಂಡಿ ಗ್ರಾಮದಲ್ಲಿ ನಡೆದಿದೆ.
ಅಗಸರಹುಂಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಫೆಬ್ರವರಿ 25ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಾಮುಕ ಶಿಕ್ಷಕ ಗಿರೀಶ್ ಎಂದು ಹೇಳಲಾಗಿದ್ದು, ವಿದ್ಯಾರ್ಥಿನಿಯರಿಗೆ ಆದ ಜಂತು ಹುಳುವಿನ ಮಾತ್ರೆ ಎಂದು ನಿದ್ರೆ ಮಾತೇ ನೀಡಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ.
ಸದ್ಯ ಶಿಕ್ಷಕರ ವಿರುದ್ಧ ಎಚ್ ಡಿ ಕೋಟೆ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಪೋಷಕರು ಶಿಕ್ಷಕರ ಬಂಧನಕ್ಕೆ ಆಗ್ರಹಿಸಿದ್ದು, ಪ್ರಕರಣದ ಕಲಿಸಿಕೊಂಡ ಪೊಲೀಸರು ನಾಪತ್ತೆಯಾಗಿರುವ ರಕ್ಷಕ ಗಿರೀಶ್ ಗಾಗಿ ಇದೀಗ ಬಲೆ ಬೀಸಿದ್ದಾರೆ ಎಂದು ತಿಳಿದುಬಂದಿದೆ.