ಬೆಂಗಳೂರು : ಬೆಂಗಳೂರಿನಲ್ಲಿ ಅಪಾರ್ಟ್ ಮೆಂಟ್ ನ 12 ನೇ ಮಹಡಿಯಿಂದ ಜಿಗಿದು ಟೆಕ್ಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಬೆಂಗಳೂರಿನಲ್ಲಿ ಗೆಳತಿ ಜೊತೆ ಲಿವಿಂಗ್ ಟುಗೆದರ್ ನಲ್ಲಿದ್ದ ಮಾಯಾಂಕ್ ರಜನಿ ಎಂಬ ಯುವಕ ಸ್ಟಾರ್ಟ್ ಅಪ್ ಶುರು ಮಾಡಿಕೊಂಡಿದ್ದ. ಕೂಡ್ಲುಗೇಟ್ ಅಪಾರ್ಟ್ ಮೆಂಟ್ ನಲ್ಲಿ ವಾಸವಿದ್ದ ಯುವಕ 12 ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.
ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.








