ಬೆಂಗಳೂರು : ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ತಾಂತ್ರಿಕ ಸಮಸ್ಯೆ ಉಂಟಾದ ಹಿನ್ನೆಲೆಯಲ್ಲಿ ಚಲ್ಲಘಟ್ಟ ಮತ್ತು ವೈಟ್ ಫೀಲ್ಡ್ ಮಾರ್ಗದಲ್ಲಿ ಸಂಚಾರ ವ್ಯತ್ಯಯ ಆಗಿದ್ದು, ಕಳೆದ ಒಂದು ಗಂಟೆಯಿಂದ ಮೆಟ್ರೋ ಸಂಚಾರದಲ್ಲಿ ವ್ಯತಯ ಉಂಟಾಗಿದೆ ವಿಜಯನಗರ ಹೊಸಹಳ್ಳಿ ನಿಲ್ದಾಣಗಳ ನಡುವೆ ವ್ಯತ್ಯಯ ಉಂಟಾಗಿದೆ. ತಾಂತ್ರಿಕ ಸಮಸ್ಯೆಯಿಂದ ಮೆಟ್ರೋ ರೈಲು ಕೆಟ್ಟು ನಿಂತಿದೆ ಕೆಟ್ಟು ನಿಂತ ರೈಲನ್ನು ಚೆಲ್ಲಘಟ್ಟ ನಿಲ್ದಾಣಕ್ಕೆ ಸ್ಥಳಾಂತರಿಸಬೇಕು ಆನಂತರ ಮೆಟ್ರೋ ರೈಲು ಸಂಚಾರ ಸಹಜ ಸ್ಥಿತಿಗೆ ಬರಲಿದೆ ಎಂದು ಬಿಎಂಆರ್‌ಸಿಎಲ್ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಚಲ್ಲಘಟ್ಟದಿಂದ ಹೊರಟ ಮೆಟ್ರೋ ರೈಲು 9.20 ರ ಸುಮಾರಿಗೆ ರಾಜರಾಜೇಶ್ವರಿ ಮೆಟ್ರೋ ನಿಲ್ದಾಣದಲ್ಲಿ ನಿಂತಿದ್ದು, ಮುಂದೆ ಚಲಿಸಿಲ್ಲ. ಸುಮಾರು 10 ನಿಮಿಷಗಳಿಂದಲೂ ನಿಲ್ದಾಣದಲ್ಲಿಯೇ ನಿಂತಿದೆ ಎಂದು ಪ್ರಯಾಣಿಕರು ತಿಳಿಸಿದ್ದಾರೆ. ಮೆಟ್ರೋ ರೈಲು ಮುಂದಕ್ಕೆ ಚಲಿಸದೆ ಇರುವ ಬಗ್ಗೆ ಸ್ಥಳದಲ್ಲಿರುವ ಸಿಬ್ಬಂದಿ ಕಾರಣ ನೀಡಿಲ್ಲ. ಬಿಎಂಆರ್‌ಸಿಎಲ್ (BMRCL) ಪ್ರತಿಕ್ರಿಯೆಗೆ ಕಾಯಲಾಗುತ್ತಿದೆ. ಮುಂದಿನ ಮಾಹಿತಿ ನೀಡುವ ವರೆಗೂ ಕಾಯಿರಿ ಎಂದು ಪ್ರಯಾಣಿಕರನ್ನು ಉದ್ದೇಶಿಸಿ ರೈಲಿನಲ್ಲಿ ಅನೌನ್ಸ್ ಮಾಡಲಾಗಿದೆ ಎಂದು ಪ್ರಯಾಣಿಕರು ತಿಳಿಸಿದ್ದಾರೆ.








