ನವದೆಹಲಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ ಸಂಬಂಧಿಸಿದಂತೆ, ಹೈಕೋರ್ಟ್ ನೀಡಿದ್ದ ಜಾಮೀನಿನ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಅರ್ಜಿ ವಿಚಾರಣೆ ಇಂದು ನಡೆಯಿತು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಪೀಠ ನಟ ದರ್ಶನ್ ಸೇರಿದಂತೆಒಟ್ಟು 7 ಮಂದಿಗೆ ನೀಡಿದ್ದ ಜಾಮೀನು ಅನ್ನು ನೀಡಿದ ಆದೇಶವನ್ನು ರದ್ದುಗೊಳಿಸುವಂತೆ ರಾಜ್ಯ ಸರ್ಕಾರ ಕೋರಿದ್ದ ಹೈಕೋರ್ಟ್‌ನ ಆದೇಶದ ವಿಚಾರಣೆಯನ್ನು ಜುಲೈ 23ಕ್ಕೆ ಮುಂದೂಡಿದೆ.
ಕಳೆದ ಡಿಸೆಂಬರ್ 13ರಂದು ಕರ್ನಾಟಕ ಹೈಕೋರ್ಟ್ ದರ್ಶನ್, ಪವಿತ್ರಗೌಡ, ಪ್ರದೂಶ್, ಜಗದೀಶ್, ಲಕ್ಷ್ಮಣ್, ಅನುಕುಮಾರ್ ಹಾಗೂ ನಾಗರಾಜುಗೆ ಜಾಮೀನು ನೀಡಿತ್ತು. ಇದನ್ನು ಪ್ರಶ್ನಿಸಿ ಬೆಂಗಳೂರು ನಗರ ಪೊಲೀಸರು ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದ್ದರು.
Actor Darshan