ಚಾಮರಾಜನಗರ : ರಾಜ್ಯದಲ್ಲಿ ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು, ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿ ಟಿಪ್ಪರ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮಾದಪಟ್ಟಣದಲ್ಲಿ ಈ ಒಂದು ಅಪಘಾತ ಸಂಭವಿಸಿದ್ದು, ಚಾಲಕ ಸೇರಿ ಮೂವರ ಸ್ಥಿತಿ ಗಂಭೀರವಾಗಿದ್ದು ಮೈಸೂರು ಆಸ್ಪತ್ರೆಗೆ ಅವರನ್ನು ಶಿಫ್ಟ್ ಮಾಡಲಾಗಿದೆ. ಮೃತರನ್ನು ಕೇರಳದ ಕಲ್ಪಟ್ಟ ಮೂಲದ ರಶೀದ್ (40) ಮತ್ತು ನಜೀರಾ (38) ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಬೇಗೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಬೇಗುರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








