ಹಾಸನ : ಹಾಸನದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಲಾರಿ ಡಿಕ್ಕಿಯಾಗಿ ಕೆಎಸ್ಆರ್ಟಿಸಿ ಚೆಕಿಂಗ್ ಇನ್ಸ್ಪೆಕ್ಟರ್ ಸಾವನ್ನಪ್ಪಿದ್ದಾರೆ. ಹಾಸನ ಜಿಲ್ಲೆಯ ಆಲೂರು ತಾಲೂಕಿನ ಪಾಳ್ಯ ಬಳಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ.
ಕೆ ಎಸ್ ಆರ್ ಟಿ ಸಿ ಚೆಕಿಂಗ್ ಇನ್ಸ್ಪೆಕ್ಟರ್ ಶಕುನಿಗೌಡ (57) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹೆದ್ದಾರಿಯಲ್ಲಿ ಬಸ್ ತಡೆದು ಶಕುನಿ ಗೌಡ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಲಾರಿ ಡಿಕ್ಕಿ ಹೊಡೆದು ಸ್ಥಳದಲ್ಲೇ ಶಕುನಿಗೌಡ ಸಾವನ್ನಪ್ಪಿದ್ದಾರೆ.ಅಪಘಾತದ ಕುರಿತು ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








