ಕೊಪ್ಪಳ : ಕೊಪ್ಪಳದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಓವರ್ ಟೆಕ್ ಮಾಡುವ ವೇಳೆ ಲಾರಿ ಚಕ್ರಕ್ಕೆ ಸಿಲುಕಿ ಇಬ್ಬರು ಸವಾರರು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಉಪಲದಿನ್ನಿ ಎಂಬ ಗ್ರಾಮದಲ್ಲಿ ನಡೆದಿದೆ.
ಬೈಕ್ ನಲ್ಲಿ ಇದ್ದಂತಹ ಶ್ರೀನಿವಾಸ್ (26) ಹಾಗು ಸಿದ್ದನಗೌಡ (25) ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ. ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಮುಸಲಾಪುರ ನಿವಾಸಿಗಳು ಎಂದು ತಿಳಿದುಬಂದಿದೆ. ಸೊಸೆ ಬರ್ತಡೆ ಹಿನ್ನೆಲೆಯಲ್ಲಿ ಶ್ರೀನಿವಾಸ್ ಸ್ನೇಹಿತನ ಜೊತೆಗೆ ತೆರಳುತ್ತಿದ್ದರು.
ಮುಸಲಾಪುರದಿಂದ ಬೈಕ್ನಲ್ಲಿ ಹಿರೇ ಅರಳಹಳ್ಳಿಗೆ ಇಬ್ಬರು ತೆರಳುತ್ತಿದ್ದರು. ಈ ವೇಳೆ ಮುಂದೆ ಹೋಗುತ್ತಿದ್ದ ಲಾರಿಯನ್ನು ಓವರ್ ಟೇಕ್ ಮಾಡುವ ಭರದಲ್ಲಿ ನಿಯಂತ್ರಣ ತಪ್ಪಿ ಲಾರಿ ಕೆಳಗಡೆ ಸಿಲುಕಿ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅಪಘಾತದ ಕುರಿತು ಬೇವೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








