ರಾಯಚೂರು : ರಾಯಚೂರಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಲಾರಿಯೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಸವಾರರು ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನಲ್ಲಿ ನಡೆದಿದೆ.
ಮೃತರನ್ನ ಬೈಕ್ ನಲ್ಲಿ ತೆರಳುತ್ತಿದ್ದ ಮಂಜುನಾಥ್ ಮತ್ತು ನಾಗಪ್ಪ ಮೃತಪಟ್ಟವರು ಎಂದು ಹೇಳಲಾಗಿದೆ. ಮಸ್ಕಿಯಿಂದ ಕುಡುಗಲದಿನ್ನಿಗೆ ತೆರಳುವಾಗ ಅಪಘಾತ ಸಂಭವಿಸಿದೆ. ಅಪಘಾತದ ಕುರಿತಂತೆ ಮಸ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.