ಉತ್ತರಕನ್ನಡ : ಉತ್ತರ ಕನ್ನಡದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. ಸೂಳೆಮರ್ಕಿ ಕ್ರಾಸ್ ಬಳಿ ಬಸ್ ಪಲ್ಟಿಯಾಗಿ 29 ಪ್ರಯಾಣಿಕರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ನಡೆದಿದೆ.
ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಸೂಳೆಮರ್ಕಿ ಗ್ರಾಮದಲ್ಲಿ ಈ ಒಂದು ಅಪಘಾತ ನಡೆದಿದೆ. ಬಾದಾಮಿಯಿಂದ ಕೆಎಸ್ಆರ್ಟಿಸಿ ಬಸ್ ಧರ್ಮಸ್ಥಳಕ್ಕೆ ತೆರಳುತ್ತಿತ್ತು. ಇವನು ಅಪಘಾತದಲ್ಲಿ ಗಾಯಗೊಂಡ ಪ್ರಯಾಣಿಕರನ್ನು ತಕ್ಷಣ ಹೊನ್ನಾವರ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ಕುರಿತು ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








