ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಭೀಕರವಾದ ಅಗ್ನಿ ಅವಘಡ ಸಂಭವಿಸಿದ್ದು, ಬೆಂಗಳೂರಿನ ಜಯನಗರದ ಜಿಬಿಎ ಕಾಂಪ್ಲೆಕ್ಸ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸುತ್ತಿದ್ದಾರೆ.
ಅಗ್ನಿ ಅವಘಡ ವೇಳೆಯಲ್ಲಿ ಇಬ್ಬರು ಸಿಲುಕಿರುವ ಮಾಹಿತಿ ತಿಳಿದು ಬಂದಿದೆ. ಹಾಗಾಗಿ ಲಿಫ್ಟ್ ನಲ್ಲಿರುವಂತಹ ಇಬ್ಬರನ್ನು ರಕ್ಷಣೆ ಮಾಡಲು ಅಗ್ನಿಶಾಮಕ ಸಿಬ್ಬಂದಿಗಳು ಅರಸರ ಪಡುತ್ತಿದ್ದಾರೆ ಘಟನೆ ಕುರಿತಂತೆ ಇನ್ನಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ. ಘಟನಾ ಸ್ಥಳಕ್ಕೆ ಜಯನಗರ ಠಾಣೆ ಪೋಲಿಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.








