ಮೈಸೂರು : ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಪಡುವಕೋಟೆಯ ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ಸಂಭವಿಸಿ ವಾಹನಗಳು ಸುಟ್ಟು ಕರಕಲಾದ ಘಟನೆ ನಡೆದಿದೆ.
ಪಡುವಕೋಟೆ ಗ್ರಾಮದ ನಿವಾಸಿ ಅಜಿತ್ ಎಂಬುವರಿಗೆ ಸೇರಿದ ಗ್ಯಾರೇಜ್ ನಲ್ಲಿ ಬೆಂಕಿ ತಗುಲಿ ಗ್ಯಾರೇಜಿನಲ್ಲಿದ್ದ 18 ಬೈಕ್ ಗಳು, ಎರಡು ಕಾರುಗಳು ಬೆಂಕಿಗೆ ಆಹುತಿಯಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದ್ದಾರೆ. ಹೆಚ್.ಡಿ. ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.