ಯಾದಗಿರಿ : ಯಾದಗಿರಿಯಲ್ಲಿ ಭೀಕರ ಅಗ್ನಿ ಅವಘಡ ಒಂದು ಸಂಭವಿಸಿದ್ದು ಶಾರ್ಟ್ ಸರ್ಕ್ಯೂಟ್ ನಿಂದ ಕಾಟನ್ ಮಿಲ್ ಒಂದು ಸಂಪೂರ್ಣವಾಗಿ ಹೊತ್ತಿ ಉರಿದಿದೆ. ಈ ವೇಳೆ ಮಿಲ್ ನಲ್ಲಿ ಇದ್ದಂತಹ ಕೋಟ್ಯಾಂತರ ರೂಪಾಯಿ ಮೌಲ್ಯದ ವಸ್ತುಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹುಲಕಲ್ ನಲ್ಲಿ ನಡೆದಿದೆ.
ಶಹಾಪುರ ತಾಲೂಕಿನ ಹುಲಕಲ್ ನಲ್ಲಿ ಶ್ರೀ ಮಣಿಕಂಠ ಕಾಟನ್ ಜಿನ್ನಿಂಗ್ ಇಂಡಸ್ಟ್ರೀಸ್ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಬೆಂಕಿ ಅವಘಡದಿಂದ ಕೋಟ್ಯಂತರ ರೂಪಾಯಿ ಮೌಲ್ಯದ ಹತ್ತಿ ಸುಟ್ಟು ಭಸ್ಮವಾಗಿದೆ. ಈ ಒಂದು ಕಾಟನ್ ಮಿಲ್ , ಗುರು ಮಣಿಕಂಠ ಎಂಬುವವರಿಗೆ ಸೇರಿದೆ.
ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹತ್ತಿಕೊಂಡಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಘಟನೆಯಲ್ಲಿ ಸುಮಾರು 15 ಕೋಟಿಗೂ ಹೆಚ್ಚು ಯಂತ್ರೋಪಕರಣಗಳು ಹಾಗೂ ಹತ್ತಿ ಸುಟ್ಟು ಕರಕಲಾಗಿದೆ, ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.








