ಆಂಧ್ರಪ್ರದೇಶದ ಶ್ರೀ ಸತ್ಯಸಾಯಿ ಜಿಲ್ಲೆ ಮಡಕಶಿರಾದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಬುಳ್ಳಸಮುದ್ರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಟೆಂಪೋ ವಾಹನ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಇತರ ಹತ್ತು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಮಡಕಶಿರಕ್ಕೆ ರವಾನಿಸಲಾಗಿದ್ದರೆ, ಅವರ ಸ್ಥಿತಿ ಚಿಂತಾಜನಕವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಹಿಂದೂಪುರ ಮತ್ತು ಬೆಂಗಳೂರಿಗೆ ರವಾನಿಸಲಾಗಿದೆ. ತಿರುಮಲ ದರ್ಶನ ಮುಗಿಸಿ ಸ್ವಗ್ರಾಮಕ್ಕೆ ಮರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ.
ಅಪಘಾತದ ವೇಳೆ ವ್ಯಾನ್‌ನಲ್ಲಿ 14 ಮಂದಿ ಪ್ರಯಾಣಿಕರಿದ್ದರು. ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ತೆರಳಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಈ ಘಟನೆಯ ಕುರಿತು ಹೆಚ್ಚಿನ ವಿವರಗಳು ಇನ್ನಷ್ಟೇ ತಿಳಿಯಬೇಕಿದೆ.