ಬೆಳಗಾವಿ : ಬೆಳಗಾವಿಯ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ಯಾಂಕರ್ ಹರಿದು ಮೂವರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೆಳಗಾವಿಯ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಟ್ಯಾಂಕರ್ ಹರಿದು ಮೂವರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಟ್ಯಾಂಕರ್ ಚಾಲಕನ ನಿರ್ಲಕ್ಷ್ಯದಿಂದ ಕಾರ್ಮಿಕರ ಮೇಲೆ ಟ್ಯಾಂಕರ್ ಹರಿದಿದ್ದು, ಈ ವೇಳೆ ಟ್ಯಾಂಕರ್ ಕೂಡ ಪಲ್ಟಿಯಾಗಿದ್ದು, ಚಾಲಕ ಕೂಡ ಗಂಭೀರವಾಗಿ ಗಾಯಗೊಂಡಿದ್ದಾರೆ. ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.