ಬೆಂಗಳೂರು : ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಲಾರಿಗೆ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ ನಲ್ಲಿದ್ದ ಮಗು ಸೇರಿ ಮೂವರು ಸ್ಥಳದಲ್ಲೇ ಸಾವವನ್ನಪ್ಪಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಗೊಟ್ಟಿಪುರ ಗೇಟ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಲಾರಿಗೆ ಡಿಕ್ಕಿ ಹೊಡೆದು ಆಂಧ್ರ ಸಾರಿಗೆ ಬಸ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 5 ವರ್ಷದ ಮಗು, 18 ವರ್ಷದ ಯುವತಿ ಹಾಗೂ 55 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.