ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಟಾಟಾ ಏಸ್ ಹಾಗೂ ಬೈಕ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಜಡಿಗೆನಹಳ್ಳಿ ಗ್ರಾಮದ ಬಳಿ ಟಾಟಾ ಏಸ್ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ತಮಿಳುನಾಡು ಮೂಲದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೊಹಮ್ಮದ್ದೀನ್ (45) ಹಾಗೂ ರಾಜಾ (42) ಮೃತ ದುರ್ದೈವಿಗಳು. ಹೊಸಕೋಟೆ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.