ದಾವಣಗೆರೆ : ದಾವಣಗೆರೆಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರು ಹಾಗೂ ಖಾಸಗಿ ಬಸ್ ನಡುವೆ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ದಾವಣಗೆರೆ ಜಿಲ್ಲೆಯ ಅತ್ತಿಗೆರೆ ಗ್ರಾಮದ ಬಳಿ ಮಾರುತಿ ಇಕೋ ಹಾಗೂ ಖಾಸಗಿ ಬಸ್ ನಡುವೆ ಡಿಕ್ಕಿಯಾಗಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತರನ್ನು ಬಸವರಾಜಪ್ಪ (38) ಶ್ರೀಧರ್ (32) ಹಾಗೂ ವಿಜಯ್ ಕುಮಾರ್ (35) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
ಮೃತರು ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಶಿರಗುಪ್ಪ ನಿವಾಸಿಗಳು. ದಾವಣಗೆರೆ ಕಡೆಯಿಂದ ಸತ್ತೆಬೆನ್ನೂರು ಕಡೆ ಹೋಗುತ್ತಿದ್ದ ವೇಳೆ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಮಾಯಕೊಂಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.