ಹಾವೇರಿ : ಹಾವೇರಿಯಲ್ಲಿ ಭೀಕರ ರಸ್ತೆ ಅಪಘಾತವಾಗಿದ್ದು, ಸಾರಿಗೆ ಬಸ್ ಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಕುಮಾರಪಟ್ಟಣ ಸಮೀಪ ಸಾರಿಗೆ ಬಸ್ ಗೆ ಕಾರು ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಪ್ರವೀಣ್ (36) ಸೇರಿದಂತೆ ಇಬ್ಬರು ಮೃತಪಟ್ಟಿದ್ದು, ಗಾಯಾಳು ಕೋಟೇಶ್ ಅವರನ್ನು ದಾವಣಗೆರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಕುಮಾರಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.