ತುಮಕೂರು : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಂಟೈನರ್ ಲಾರಿಗೆ ಬೈಕ್ ಡಿಕ್ಕಿಯಾದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ತುಮಕೂರು ಗ್ರಾಮಾಂತರ ವ್ಯಾಪ್ತಿಯ ಹಿರೇಹಳ್ಳಿ ಸಮೀಪದ ನಂದಿಹಳ್ಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
ಬಂಕ್ ನಲ್ಲಿ ಪೆಟ್ರೋಲ್ ತುಂಬಿಸಿಕೊಂಡು ಹೊರ ಬರುತ್ತಿದ್ದ ಕಂಟೈನರ್ ಲಾರಿಗೆ ಡಿಕ್ಕಿ ಹೊಡೆದು ಬೈಕ್ ನಲ್ಲಿದ್ದ ಮೂವರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕ್ಯಾತಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.