ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಚಿತ್ರದುರ್ಗ ತಾಲೂಕಿನ ಸಿಬಾರಾ ಗ್ರಾಮದ ಬಳಿ ಲಾರಿ-ಇನ್ನೋವಾ ಕಾರು ಡಿಕ್ಕಿಯಾಗಿ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಬೆಂಗಳೂರು ಮೂಲದ ಲಾರಿ ಹಾಗೂ ಕಾರಿನ ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.