ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ತಾಳೇಕೆರೆ ಗ್ರಾಮದ ಬಳಿ ಸರಣಿ ಅಪಘಾತ ಸಂಭವಿಸಿದ್ದು, ಇಬ್ಬರು ಮಕ್ಕಳು ಸೇರಿದಂತೆ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ-4 ರಲ್ಲಿ ಸರಣಿ ಅಪಘಾತ ಸಂಭವಿಸಿದೆ. ಲಾರಿಗಳ ನಡುವೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿದಂತೆ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಸರಣಿ ಅಪಘಾತ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿ.ಮೀ.ಗಟ್ಟಲೆ ಟ್ರಾಫಿಕ್ ಜಾಮ್ ಆಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.