ಬೆಂಗಳೂರು : ಆರ್ ಸಿಬಿ ಸಂಭ್ರಮಾಚರಣೆಯಲ್ಲಿ ಭೀಕರ ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿದ್ದು, ಇಂದು ಸಂಜೆ 7.30 ಕ್ಕೆ ಸಿಎಂ ಸಿದ್ದರಾಮಯ್ಯ ಮಹತ್ವದ ಸುದ್ದಿಗೋಷ್ಠಿ ನಡೆಸಲಿದ್ದಾರೆ.
ಆರ್ಸಿಬಿ ಆಟಗಾರರನ್ನು ಸ್ವಾಗತಿಸಲು ಅಭಿಮಾನಿಗಳು ಕಿಕ್ಕಿರಿದು ಸೇರಿದ್ದಾರೆ. ಈ ನಡುವೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಅಭಿಮಾನಿಗಳು ಭಾರೀ ಸಂಖ್ಯೆಯಲ್ಲಿ ಸೇರಿದ್ದು, ಗೇಟ್ ನಂ.12 ರಲ್ಲಿ ಕಾಲ್ತುಳಿತ ಉಂಟಾಗಿದ್ದು, ಈ ವೇಳೆ ಕೆಲ ಅಭಿಮಾನಿಗಳು ಅಸ್ವಸ್ಥರಾಗಿದ್ದಾರೆ. ಈ ವೇಳೆ ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ. ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿದ್ದು, 15 ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಆಭಿಮಾನದ ಹೆಸರಲ್ಲಿ ಭಾರಿ ದುರಂತ ಸಂಭವಿಸಿದ್ದು, ಬೌರಿಂಗ್ ಆಸ್ಪತ್ರೆ ಮಾತ್ರವಲ್ಲ ಮಲ್ಯ ರಸ್ತೆಯ ವೈದೇಹಿ ಆಸ್ಪತ್ರೆಗೂ ಗಾಯಾಳುಗಳನ್ನು ದಾಖಲಿಸಲಾಗಿದೆ. ಸದ್ಯ 7 ಮಂದಿಗೆ ವೈದೇಹಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಇದರಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಒಟ್ಟು ಘಟನೆಯಲ್ಲಿ 11 ಮಂದಿ ಸಾವನ್ನಪ್ಪಿದ್ದಾರೆ.