ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.
ಕರ್ನಾಟಕ ವಿಧಾನಸಭೆಯ ವಿಪಕ್ಷ ನಾಯಕ ಆರ್ ಅಶೋಕ್ ಅವರು, ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಗೆ ಭೇಟಿ ನೀಡಿದ್ದು, ಗಾಯಗೊಂಡವರ ಆರೋಗ್ಯ ವಿಚಾರಿಸಿದ್ದಾರೆ.
ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಅಭಿಮಾನಿಗಳು ಭಾರೀ ಸಂಖ್ಯೆಯಲ್ಲಿ ಸೇರಿದ್ದು, ಗೇಟ್ ನಂ.12 ರಲ್ಲಿ ಕಾಲ್ತುಳಿತ ಉಂಟಾಗಿದ್ದು, ಈ ವೇಳೆ ಕೆಲ ಅಭಿಮಾನಿಗಳು ಅಸ್ವಸ್ಥರಾಗಿದ್ದಾರೆ. ಈ ವೇಳೆ ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ. ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿದ್ದು, 15 ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
VIDEO | Karnataka Legislative Assembly LoP R Ashok (@RAshokaBJP) visits Bowring and Lady Curzon Hospital to meet those injured in the stampede at Chinnaswamy Stadium. Four people have died in the incident.
(Full video available on PTI Videos – https://t.co/n147TvrpG7) pic.twitter.com/NkXyUGL913
— Press Trust of India (@PTI_News) June 4, 2025
ಆಭಿಮಾನದ ಹೆಸರಲ್ಲಿ ಭಾರಿ ದುರಂತ ಸಂಭವಿಸಿದ್ದು, ಬೌರಿಂಗ್ ಆಸ್ಪತ್ರೆ ಮಾತ್ರವಲ್ಲ ಮಲ್ಯ ರಸ್ತೆಯ ವೈದೇಹಿ ಆಸ್ಪತ್ರೆಗೂ ಗಾಯಾಳುಗಳನ್ನು ದಾಖಲಿಸಲಾಗಿದೆ. ಸದ್ಯ 7 ಮಂದಿಗೆ ವೈದೇಹಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಇದರಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಒಟ್ಟು ಘಟನೆಯಲ್ಲಿ 11 ಮಂದಿ ಸಾವನ್ನಪ್ಪಿದ್ದಾರೆ.