ಮಂಡ್ಯ : ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಘೋರ ದುರಂತವೊಂದು ಸಂಭವಿಸಿದ್ದು, ಟಿಪ್ಪರ್ ಡಿಕ್ಕಿಯಾಗಿ ಇನ್ನೋವಾ ಕಾರು ಹೊತ್ತಿ ಉರಿದಿದ್ದು, ಚಾಲಕ ಸಜೀವ ದಹನವಾಗಿರುವ ಘಟನೆ ನಡೆದಿದೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಪಾಲಹಳ್ಳಿಯಲ್ಲಿ ಟಿಪ್ಪರ್ ಲಾರಿ ಡಿಕ್ಕಿಯಾಗಿ ಇನ್ನೋವಾ ಕಾರು ಹೊತ್ತಿ ಉರಿದ ಪರಿಣಾಮ ಕಾರಿನಲ್ಲಿದ್ದ ಹುಣಸೂರು ಮೂಲದ ಚಂದ್ರಶೇಖರ್ ಸಜೀವ ದಹವಾಗಿದ್ದಾರೆ. ಕಾರಿನಿಂದ ಹೊರಬಾರಲಾಗದೇ ಚಾಲಕ ಚಂದ್ರಶೇಖರ್ ಸಜೀವ ದಹನವಾಗಿದ್ದಾರೆ.
ಸದ್ಯ ಚಂದ್ರಶೇಖರ್ ಶವವನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ರವಾನಿಸಲಾಗಿದೆ. ಶ್ರೀರಂಗಪಟ್ಟಣ ಟೌನ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.








