ಶ್ರೀನಗರ : ಉಗ್ರರ ಜೊತೆಗೆ ನಂಟು ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಜಮ್ಮು-ಕಾಶ್ಮೀರದ ಹಲವೆಡೆ ಭಯೋತ್ಪಾದಕ ನಿಗ್ರಹ ದಳದ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಜಮ್ಮು-ಕಾಶ್ಮೀರದ ಶೋಪಿಯಾನ, ಕುಪ್ವಾರ, ಶ್ರೀನಗರದ ಹಲವರ ಮನೆಗಳ ಮೇಲೆ ದಾಳಿ ನಡೆಸಲಾಗಿದೆ. ಉಗ್ರರ ಜೊತೆಗೆ ನಂಟು ಹೊಂದಿರುವವರ ಮನೆಗಳ ಮೇಲೆ ದಾಳಿ ನಡೆಸಲಾಗಿದ್ದು, ಪರಿಶೀಲನೆ ನಡೆಯುತ್ತಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.