ಶ್ರೀನಗರ : ಜಮ್ಮು-ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ ದಾಳಿ ಬೆನ್ನಲ್ಲೇ ಮತ್ತೆ ಜಮ್ಮುಕಾಶ್ಮೀರದಲ್ಲಿ ನಾಗರಿಕರ ಮೇಲೆ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ.
ಜುಮ್ಮು-ಕಾಶ್ಮೀರದ ಕುಪ್ವಾರದಲ್ಲಿ ನಾಗರಿಕರ ಮೇಲೆ ಉಗ್ರರು ಫೈರಿಂಗ್ ಮಾಡಿ ಪರಾರಿಯಾಗಿದ್ದು, ಘಟನೆಯಲ್ಲಿ 43 ವರ್ಷದ ಓರ್ವ ನಾಗಕರಿಕ ಗಾಯಗೊಂಡಿದ್ದಾರೆ. ಉಗ್ರರಿಗಾಗಿ ಪೊಲೀಸರು, ಸೇನೆ ಕಾರ್ಯಾಚರಣೆ ನಡೆಸಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.