ಬೆಂಗಳೂರು : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ದಾಳಿಗೆ ಬಲಿಯಾದ ಇಬ್ಬರು ಕನ್ನಡಿಗರ ಮೃತದಹೇವನ್ನು ಶ್ರೀನಗರ ಆಸ್ಪತ್ರೆಗೆ ರವಾನಿಸಲಾಗಿದ್ದು, ಇಂದೇ ರಾಜ್ಯಕ್ಕೆ ಮೃತರ ಶವಗಳನ್ನು ಶಿಫ್ಟ್ ಮಾಡಲಾಗುತ್ತದೆ.
ಜಮ್ಮುಕಾಶ್ಮೀರದ ಪ್ರವಾಸಕ್ಕೆ ತೆರಳಿದ್ದ ವೇಳೆ ಪಹಲ್ಗಾಮ್ ನಲ್ಲಿ ಉಗ್ರರು ನಡೆಸಿದ ದಾಳಿಯಲ್ಲಿ ಶಿವಮೊಗ್ಗ ಜಿಲ್ಲೆಯ ಉದ್ಯಮಿ ಮಂಜುನಾಥ್ ಹಾಗೂ ಹಾವೇರಿಯ ರಾಣೆಬೆನ್ನೂರಿನ ನಿವಾಸಿ ಭರತ್ ಭೂಷಣ್ ಅವರು ಬಲಿಯಾಗಿದ್ದು, ಸದ್ಯ ಮೃತದೇಹಗಳನ್ನು ಶ್ರೀನಗರದ ಆಸ್ಪತ್ರೆಗೆ ರವಾನಿಸಲಾಗಿದೆ. ಇಂದು ಮರಣೋತ್ತರ ಪರೀಕ್ಷೆ ಬಳಿಕ ಸಂಜೆ ವೇಳೆ ರಾಜ್ಯಕ್ಕೆ ಮೃತದೇಹಗಳನ್ನು ಶಿಫ್ಟ್ ಮಾಡಲಾಗುತ್ತದೆ.
ಇನ್ನು ಜಮ್ಮುಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ಸಚಿವ ಸಂತೋಷ್ ಲಾಡ್ ಈಗಾಗಲೇ ಶ್ರೀನಗರಕ್ಕೆ ತಲುಪಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.
#WATCH | Karnataka Minister Santosh Lad left for Srinagar, J&K in view of the #PahalgamTerroristAttack. Late-night visuals from Hubballi Airport.
(Source: State Information Centre) pic.twitter.com/JQAkzrRZrF
— ANI (@ANI) April 23, 2025