ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಬೆಂಗಳೂರು ಉತ್ತರ ಜಿಲ್ಲೆ ಎಂದು ಹೆಸರು ಬದಲಾವಣೆಗೆ ಇದೀಗ ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದ್ದು ಇನ್ಮುಂದೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಬೆಂಗಳೂರು ಉತ್ತರ ಜಿಲ್ಲೆ ಎಂದು ಮರು ನಾಮಕರಣ ಮಾಡಲಾಗಿದೆ.
ಇಂದು ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಬೆಟ್ಟದಲ್ಲಿ ನಡೆದ ವಿಶೇಷ ಸಂಪುಟ ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಬೆಂಗಳೂರು ಉತ್ತರ ಜಿಲ್ಲೆಯನ್ನಾಗಿ ಮಾಡುವ ಕುರಿತು ಪ್ರಸ್ತಾವನೆ ಪ್ರಸ್ತಾಪಿಸಲಾಯಿತು. ಈ ವೇಳೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಬೆಂಗಳೂರು ಉತ್ತರ ಜಿಲ್ಲೆಯನ್ನು ಮರುನಾಮಕರಣ ಮಾಡಿ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ.
ಅದೇ ರೀತಿಯಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದ ಹೆಸರು ಕೂಡ ಬದಲಾವಣೆಗೆ ಅನುಮೋದನೆ ದೊರಕಿದೆ. ಬಾಗೇಪಲ್ಲಿಯ ಹೆಸರು ಭಾಗ್ಯನಗರ ಎಂದು ಮರುನಾಮಕರಣ ಮಾಡಲಾಗಿದ್ದು,ಬಾಗೇಪಲ್ಲಿ ಹೆಸರು ಬದಲಾಯಿಸಲು ಕ್ಯಾಬಿನೆಟ್ ಸಭೆಯಲ್ಲಿ ಅನುಮೋದನೆ ಸಿಕ್ಕಿದೆ.