ಬೆಂಗಳೂರು : ರಾಜ್ಯದಲ್ಲಿ ಸಚಿವ ಸಂಪುಟ ಪುನಾರಚನೆ ಬಹುತೇಕ ಫಿಕ್ಸ್ ಎಂದೇ ಹೇಳಲಾಗುತ್ತಿದೆ. ಏಕೆಂದರೆ ಈಗಾಗಲೇ ಸಿಎಂ ಸಿದ್ದರಾಮಯ್ಯ ಸಹ ಎಲ್ಲ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಔತಣಕೂಟ ಸಹ ಏರ್ಪಡಿಸಿದ್ದರು. ಹೀಗಾಗಿ ಇದೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ರಾಮಲಿಂಗಾರೆಡ್ಡಿ ಡಿಸೇಂಬರ್ ನಲ್ಲಿ ಸಚಿವ ಸಂಪುಟ ಪುನಾರಚನೆ ಆಗಲಿದೆ ಎಂದು ಸುಳಿವು ನೀಡಿದ್ದಾರೆ.
ಬೆಂಗಳೂರಲ್ಲಿ ಮಾತನಾಡಿದ ಅವರು, ಸಚಿವ ಸಂಪುಟ ಪುನಾರಚನೆ ಕುರಿತು ಸಚಿವ ರಾಮಲಿಂಗ ರೆಡ್ಡಿ ಇದೀಗ ಮಹಾತ್ವದ ಸುಳಿವು ಕೊಟ್ಟಿದ್ದಾರೆ ಡಿಸೆಂಬರ್ ನಲ್ಲಿ ಸಚಿವ ಸಂಪುಟ ಪುನರ್ ರಚನೆ ಆಗಲಿದೆ. ನಮ್ಮಲ್ಲಿ 7 ರಿಂದ 8 ಹಿರಿಯ ಶಾಸಕರಿದ್ದಾರೆ ಅವರಿಗೂ ಕೂಡ ಅವಕಾಶ ಕೊಡಬೇಕಲ್ವಾ ಎಂದು ಬೆಂಗಳೂರಿನಲ್ಲಿ ಸಚಿವ ರಾಮಲಿಂಗಾರೆಡ್ಡಿ ಹೇಳಿಕೆ ನೀಡಿದರು.