ಶಿವಮೊಗ್ಗ : ಆತ್ಮಹತ್ಯೆಗೆ ಯತ್ನಿಸಿದ್ದ ಸಿಇಓ ಮನೆಯ ಅಡುಗೆ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಶಿವಮೊಗ್ಗ ಜಿಲ್ಲಾ ಪಂಚಾಯತ್ ಸಿಇಓ ಮನೆಯ ಅಡುಗೆ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ಸುರೇಶ್ ಎನ್ನುವವರು ಆತ್ಮಹತ್ಯೆಗೆ ಯತ್ನಿಸಿದ್ದರು. ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು ಆದರೆ ಇಂದು ಚಿಕಿತ್ಸೆ ಫಲಿಸದೆ ಸುರೇಶ್ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಅಡುಗೆ ಸಿಬ್ಬಂದಿ ಸುರೇಶ್ ಸಾವನ್ನಪ್ಪಿದ್ದಾರೆ ಸಮಾಜ ಕಲ್ಯಾಣ ಇಲಾಖೆಯ ಕಚೇರಿ ಬಳಿ ಸುರೇಶ್ ಆತ್ಮಹತ್ಯೆಗೆ ಯತ್ನಿಸಿದ್ದರು. ಕೂಡಲೆ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿ ಆಗದೆ ಸುರೇಶ ಇದೀಗ ಸಾವನಪ್ಪಿದ್ದಾರೆ.
ಪತ್ನಿ ಅನಾರೋಗ್ಯದಿಂದ ಬಳಲುತ್ತಿದ್ದರಿಂದ ಸುರೇಶ್ ಒಂಬತ್ತು ದಿನ ರಜೆ ತೆಗೆದುಕೊಂಡಿದ್ದರು. ಜುಲೈ 31ರಂದು ಮತ್ತೆ ಸುರೇಶ ಕೆಲಸಕ್ಕೆ ಹಾಜರಾಗಿದ್ದಾರೆ. 9 ದಿನ ಗೈರಾಗಿದ್ದಕ್ಕೆ ಅಡುಗೆ ಸಿಬ್ಬಂದಿ ಸುರೇಶ್ ಗೆ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ತರಾಟೆಗೆ ತೆಗೆದುಕೊಂಡಿದ್ದರು. ಸಿಇಓ ಮಾತಿನಿಂದ ಮನನೊಂದಿದ್ದ ಸುರೇಶ್ ಆತ್ಮಹತ್ಯೆಗೆ ಯತ್ನಿಸಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗಿದೆ ಅಡುಗೆ ಸಿಬ್ಬಂದಿ ಸುರೇಶ್ ಸಾವನಪ್ಪಿದ್ದಾರೆ.