ಕಲಬುರಗಿ : ನವೆಂಬರ್ 1 ರ ಇಂದು ರಾಜ್ಯಾದ್ಯಂತ ಸಂಭ್ರಮದಿಂದ ಕನ್ನಡ ರಾಜ್ಯೋತ್ಸವ ಆಚರಿಸಲಾಗುತ್ತಿದ್ದು, ಕಲಬುರಗಿಯಲ್ಲಿ ಪ್ರತ್ಯೇಕ ರಾಜ್ಯದ ಕೂಗು ಮೊಳಗಿದೆ.
ಹೌದು, ರಾಜ್ಯೋತ್ಸವದ ದಿನ ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಗಿದೆ. ಕಲಬುರಗಿಯ ಜಗತ್ ವೃತ್ತದಲ್ಲಿ ಹೋರಾಟಗಾರರು ಧರಣಿ ನಡೆಸಿದ್ದಾರೆ.
ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಜಾಗೃತಿ ಸಮಿತಿ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದೆ. ಈ ವೇಳೆ ಪ್ರತ್ಯೇಕ ಧ್ವಜಾರೋಹಣಕ್ಕೆ ಹೋರಾಟಗಾರರು ಮುಂದಾಗಿದ್ದಾರೆ. 20 ಕ್ಕೂ ಅಧಿಕ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.








