ಬೆಂಗಳೂರು : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದೇನೆ ಎಂದು ಮಾಸ್ಕ್ ಮ್ಯಾನ್ ಚಿನ್ನಯ ಹೇಳಿಕೆ ನೀಡಿದ್ದ, ಇದರ ಬೆನ್ನಲ್ಲೆ ರಾಜ್ಯ ಸರ್ಕಾರ ಸಹ ಎಸ್ಐಟಿ ರಚನೆ ಮಾಡಿ ತನಿಖೆಗೆ ಆದೇಶ ನೀಡಿತ್ತು. ಆದರೆ ತನಿಖೆಯಲ್ಲಿ ದಿನವೊಂದಕ್ಕೆ ಟ್ವಿಸ್ಟ್ ಸಿಕ್ಕಿದ್ದು ಕೊನೆಗೆ ಮಾಸ್ಕ್ ಮ್ಯಾನ್ ಚಿನ್ನಯ ತಪ್ಪು ಒಪ್ಪಿಕೊಂಡಿದ್ದಾನೆ.
ಬಳಿಕ ಮಾಸ್ ಮ್ಯಾನ್ ಚಿನ್ನಯನನ್ನು SIT ಅಧಿಕಾರಿಗಳು ವಶಕ್ಕೆ ಪಡೆದು ಕೋರ್ಟಿಗೆ ಹಾಜರುಪಡಿಸಿದ್ದರು. ಈ ವೇಳೆ ಕೋರ್ಟ್ ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು ಎಸ್ಐಟಿ ಕಸ್ಟಡಿಗೆ ನೀಡಿತು. ಇದೀಗ ಇಂದು ಕಸ್ಟಡಿ ಅವಧಿ ಅಂತ್ಯವಾಗಲಿದೆ. ಇಂದು ಮತ್ತೆ ಚಿನ್ನಯ್ಯನ್ನು ಕೋರ್ಟಿಗೆ ಹಾಜರಪಡಿಸಲಿದ್ದು ಚಿನ್ನಯ್ಯ ಬಹುತೇಕ ಜೈಲು ಪಾಲಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಇಂದು ಚಿನ್ನಯನನ್ನು ಎಸ್ ಐ ಟಿ ಅಧಿಕಾರಿಗಳು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ 15 ದಿನಗಳ ಕಾಲ ಚಿನ್ನಯ ಎಸ್ಐಟಿ ಪೊಲೀಸರ ಕಸ್ಟಡಿಯಲ್ಲಿ ಇದ್ದ. ಆಗಸ್ಟ್ 23 ರಂದು ಎಸ್ಐಟಿ ಅಧಿಕಾರಿಗಳು ಚಿನ್ನಯನನ್ನು ಬಂಧಿಸಿ ಕೋರ್ಟಿಗೆ ಹಾಜರುಪಡಿಸಿದ್ದರು. ಈ ವೇಳೆ ಪ್ರಾರಂಭದಲ್ಲಿ 12 ದಿನಗಳ ಕಾಲ ನ್ಯಾಯಾಲಯ ಕಸ್ಟಡಿಗೆ ನೀಡಿತ್ತು.
ಬಳಿಕ ಮತ್ತೆ ಮೂರು ದಿನ ಕಸ್ಟಡಿಗೆ ಎಸ್ಐಟಿ ಪೊಲೀಸರು ಪಡೆದಿದ್ದರು. ಇದೀಗ ಒಟ್ಟು 15 ದಿನಗಳ ಕಾಲ ಎಸ್ ಐ ಟಿ ಪೊಲೀಸ್ ಕಸ್ಟಡಿ ಎಂದು ಅಂತ್ಯವಾಗಿದೆ. ಇಂದು ವೈದ್ಯಕೀಯ ತಪಾಸಣೆ ಮಾಡಿಸಲಿದ್ದಾರೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು, ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ನಡೆಯಲಿದೆ ಬಳಿಕ ಬೆಳತಂಗಡಿ ಕೋರ್ಟಿಗೆ ಚಿನ್ನಯ್ಯನನ್ನು ಹಾಜರುಪಡಿಸಲಿದ್ದಾರೆ. ಇಂದು ಚಿನ್ನಯನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಸಾಧ್ಯತೆ ಇದೆ ಎನ್ನಲಾಗಿದೆ.








