ಬೆಂಗಳೂರು : ಕ್ಯಾಬಿನೆಟ್ ನಲ್ಲಿ ಜಾತಿಗಣತಿ ಕುರಿತು ಚರ್ಚೆ ಅಪೂರ್ಣಗೊಂಡಿದೆ. ಜಾತಿಗಣತಿ ವರದಿ ಬಗ್ಗೆ ಯಾರೂ ವಿರೋಧ ವ್ಯಕ್ತಪಡಿಸಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಭೆಯಲ್ಲಿ ಜಾತಿಗಣತಿ ವರದಿ ಬಗ್ಗೆ ಏರುಧ್ವನಿಯಲ್ಲಿ ಮಾತನಾಡಿದ್ರೂ ಅನ್ನೋದು ಸುಳ್ಳು. ನಿನ್ನೆಯ ಕ್ಯಾಬಿನೆಟ್ ನಲ್ಲಿ ಚರ್ಚೆ ಅಪೂರ್ಣವಾಗಿದ್ದು, ಆದರೆ ಯಾರೂ ವಿರೋಧ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.