ಚಿಕ್ಕಮಗಳೂರು : ಕಳೆದ ಹತ್ತು ದಿನಗಳಿಂದ ನಾಪತ್ತೆಯಾಗಿದ್ದ ಫಾರೆಸ್ಟ್ ಗಾರ್ಡ್ ಶರತ್ ಇಂದು ಶವವಾಗಿ ಪತ್ತೆಯಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದ ನೀಲಗಿರಿ ಪ್ಲಾಂಟೇಶನ್ ನಲ್ಲಿ ಬೆತ್ತಲೆಯಾಗಿ ಶರತ್ (33) ಇದೀಗ ಮೃತದೇಹ ಪತ್ತೆಯಾಗಿದೆ.
ನೀಲಗಿರಿ ಪ್ಲಾಂಟೇಶನ್ ನಲ್ಲಿ ಫಾರೆಸ್ಟ್ ಗಾರ್ಡ್ ಶರತ್ ನನ್ನು ಇದೀಗ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗುತ್ತಿದೆ. ಫಾರೆಸ್ಟ್ ಗಾರ್ಡ್ ಶರತ್ ಮೂಲತಃ ಕೊಡಗು ಜಿಲ್ಲೆಯ ಕಾಲೋ ನಿವಾಸಿಯಾಗಿದ್ದು ಶರತ್ ಗಾಗಿ 10 ದಿನಗಳಿಂದ ಅರಣ್ಯ ಸಿಬ್ಬಂದಿ ಮತ್ತು ಪೊಲೀಸರು ತೀವ್ರ ಹುಡುಕಾಟ ನಡೆಸಿದ್ದರು. ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ನಾಪತ್ತೆಯಾಗಿದ್ದ ಕುರಿತು ಪ್ರಕರಣ ಕೂಡ ದಾಖಲಾಗಿತ್ತು