ಬೆಂಗಳೂರು : ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳ ಕಚೇರಿ ವೇಳೆಯಲ್ಲಿ ಖಾಸಗಿ ವ್ಯಕ್ತಿಗಳು ಅನಧಿಕೃತವಾಗಿ ಫೋಟೋ/ ವಿಡಿಯೋ ಮಾಡದಂತೆ ನಿಷೇಧಿಸಿರುವ ಆದೇಶವನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಾಪಸ್ ಪಡೆದಿದೆ.
ರಾಜ್ಯ ಸರ್ಕಾರದ ಆದೇಶದಲ್ಲಿ ಏನಿದೆ?
ರಾಜ್ಯ ಸರ್ಕಾರದ ಇಲಾಖೆಗಳ ಕಚೇರಿ ವೇಳೆಯಲ್ಲಿ ಖಾಸಗಿ ವ್ಯಕ್ತಿಗಳು ಫೋಟೋ/ವೀಡಿಯೋ ಮಾಡದಂತೆ ನಿಷೇಧಿಸಿರುವ ಕುರಿತು ಆದೇಶವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ.
ಮೇಲೇ ಓದಲಾದ ಸರ್ಕಾರದ ಆದೇಶವನ್ನು ಪುನಃ ಪರಿಶೀಲಿಸಿ, ಈ ಕೆಳಕಂಡಂತೆ ಆದೇಶ ಮಾಡಲಾಗಿದೆ. ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ 40(ಆಸು) ಕತವ 2022 (ಬಾಗ-1) ಬೆಂಗಳೂರು ದಿನಾಂಕ 15/7/2022 ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ (ಆಸು) 40 ಕತವ 2022 ಬೆಂಗಳೂರು ದಿನಾಂಕ: 15/7/2022 ವನ್ನು ತಕ್ಷಣದಿಂದ ಹಿಂಪಡೆಯಲಾಗಿದೆ.