ಬೆಂಗಳೂರು : 10 ಜಿಲ್ಲೆಗಳಿಗೆ ಸಂಬಂಧಿಸಿದ 12 ತಾಲ್ಲೂಕುಗಳ, ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿಗಳ ಪ್ರಾದೇಶಿಕ ಚುನಾವಣಾ ಕ್ಷೇತ್ರಗಳನ್ನು ಈ ಕೂಡಲೇ ಜಾರಿಗೆ ಬರುವಂತೆ ರಾಜ್ಯ ಸರ್ಕಾರ ಹಿಂಪಡೆದಿದೆ.
ಮೇಲೆ ಓದಲಾದ 1 ರಿಂದ 20 ರ ಸರ್ಕಾರದ ಅಧಿಸೂಚನೆಗಳಲ್ಲಿ 10 ಜಿಲ್ಲೆಗಳಿಗೆ ಸಂಬಂಧಿಸಿದ 12 ತಾಲ್ಲೂಕುಗಳ, ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿಗಳ ಚುನಾಯಿತ ಸದಸ್ಯರ ಸಂಖ್ಯೆಯನ್ನು ಹಾಗೂ ಪ್ರಾದೇಶಿಕ ಚುನಾವಣಾ ಕ್ಷೇತ್ರಗಳ ಸೀಮಾ/ಗಡಿಗಳನ್ನು ಗುರುತಿಸಿ ಅಧಿಸೂಚನೆಗಳನ್ನು, ಸರ್ಕಾರವು ಕರ್ನಾಟಕ ರಾಜ್ಯ ಪತ್ರದಲ್ಲಿ ಪ್ರಕಟಿಸಿದೆ.
ಮೇಲೆ ಓದಲಾದ 21 ರಿಂದ 29 ರ ಅಧಿಸೂಚನೆಗಳಲ್ಲಿ ನಗರಾಭಿವೃದ್ಧಿ ಇಲಾಖೆಯು, ಕೆಲವು ಗ್ರಾಮೀಣ ಪ್ರದೇಶಗಳನ್ನು ನಗರ ಸಂಸ್ಥೆಗಳನ್ನಾಗಿ ಪರಿವರ್ತಿಸಿ ಅಧಿಸೂಚನೆಗಳನ್ನು ಕರ್ನಾಟಕ ರಾಜ್ಯ ಪತ್ರದಲ್ಲಿ ಪ್ರಕಟಿಸಿರುತ್ತದೆ.
ಮೇಲೆ ಓದಲಾದ 30ರ ಅಧಿಸೂಚನೆಯಲ್ಲಿ ಕಂದಾಯ ಇಲಾಖೆಯು ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲ್ಲೂಕು ಸೋಲೂರು ಹೋಬಳಿಯ 68 ಗ್ರಾಮಗಳನ್ನು ಬೇರ್ಪಡಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿಗೆ ಸೇರ್ಪಡೆಗೊಳಿಸಿರುತ್ತದೆ. ಈ ಹಿನ್ನೆಲೆಯಲ್ಲಿ ಪರಿವರ್ತನೆಗೊಂಡಿರುವ ಗ್ರಾಮೀಣ ಪ್ರದೇಶಗಳನ್ನು 1 ರಿಂದ 20ರ ಅಧಿಸೂಚನೆಗಳಲ್ಲಿ ಹೊರಡಿಸಿರುವ 10 ಜಿಲ್ಲೆಗಳಿಗೆ ಸಂಬಂಧಿಸಿದ 12 ತಾಲ್ಲೂಕುಗಳ, ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿಗಳ ಪ್ರಾದೇಶಿಕ ಚುನಾವಣಾ ಕ್ಷೇತ್ರಗಳ ವ್ಯಾಪ್ತಿಯಿಂದ ಕೈಬಿಡಬೇಕಾಗಿರುವುದರಿಂದ,
ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ರ ಪ್ರಕರಣ 121 ಮತ್ತು ಪ್ರಕರಣ 160 ರನ್ವಯ ಅನುಕ್ರಮವಾಗಿ ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿಗಳ ಚುನಾಯಿತ ಸದಸ್ಯರ ಸಂಖ್ಯೆಯನ್ನು ಗ್ರಾಮೀಣ ಜನಸಂಖ್ಯೆಯ ಆಧಾರದ ಮೇಲೆ ಹಾಗೂ ಪ್ರಕರಣ 124 ಮತ್ತು ಪ್ರಕರಣ 163 ರನ್ವಯ ಅನುಕ್ರಮವಾಗಿ ತಾಲ್ಲೂಕು ಪಂಚಾಯತಿ ಹಾಗೂ ಜಿಲ್ಲಾ ಪಂಚಾಯತಿಗಳ ಪ್ರಾದೇಶಿಕ ಚುನಾವಣಾ ಕ್ಷೇತ್ರಗಳನ್ನು ರಚಿಸಬೇಕಾಗಿರುವುದರಿಂದ,
ಕೋಷ್ಠಕ “ಅ” ದಲ್ಲಿ ನಮೂದಿಸಿರುವ ಜಿಲ್ಲೆಗಳ ಮುಂದೆ ಗುರುತಿಸಿರುವ ತಾಲ್ಲೂಕುಗಳ, ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿಗಳ ಪ್ರಾದೇಶಿಕ ಚುನಾವಣಾ ಕ್ಷೇತ್ರಗಳನ್ನು ಈ ಕೂಡಲೇ ಜಾರಿಗೆ ಬರುವಂತೆ ಹಿಂಪಡೆದಿದೆ.









