ಬೆಂಗಳೂರು : ಬಿಜೆಪಿ ಶಾಸಕ ದಿನಕರ ಶೆಟ್ಟಿ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ ಅರ್ಜಿ ಇದೀಗ ವಜಾಗೊಂಡಿದೆ. ಹೈಕೋರ್ಟ್ ಜೆಡಿಎಸ್ ಅಭ್ಯರ್ಥಿ ಸಲ್ಲಿಸಿದ್ದ ಅರ್ಜಿಯನ್ನು ಇದೀಗ ಧಾರವಾಡ ಹೈಕೋರ್ಟ್ ಪೀಠ ವಜಾಗೊಳಿಸಿದೆ. ಕುಮಟಾ ಬಿಜೆಪಿ ಶಾಸಕ ದಿನಕರ ಆಯ್ಕೆಯನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಯನ್ನು ಧಾರವಾಡ ಹೈಕೋರ್ಟ್ ಪೀಠ ವಜಾಗೊಳಿಸಿ ಆದೇಶ ಹೊರಡಿಸಿದೆ.
ಎರಡು ವರ್ಷದ ಹಿಂದೆ ಜೆಡಿಎಸ್ ಅಭ್ಯರ್ಥಿ ಈ ವಿಚಾರವಾಗಿ ಹೈಕೋರ್ಟ್ ಮೆಟ್ಟಿಲು ಏರಿದ್ದರು. ಅಭ್ಯರ್ಥಿ ಸೂರಜ್ ಸೋನಿ ಸಲ್ಲಿಸಿದ ಅರ್ಜಿ ಇದೀಗ ವಜಾಗೊಳಿಸಿದೆ. 2023ರ ವಿಧಾನಸಭೆ ಚುನಾವಣೆಯಲ್ಲಿ ದಿನಕರ ಶೆಟ್ಟಿ ಗೆದ್ದಿದ್ದರು. ಇವರ ಈ ಒಂದು ಆಯ್ಕೆಯನ್ನು ಪ್ರಶ್ನಿಸಿ ಸೂರಜ್ ಸೋನಿ ಎರಡು ವರ್ಷದ ಹಿಂದೆ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಧಾರವಾಡ ಹೈಕೋರ್ಟ್ ಪೀಠ ಸೂರಜ್ ಸೋನಿ ಸಲ್ಲಿಸಿದ ಅರ್ಜಿ ವಜಾಗೊಳಿಸಿದೆ.