ಬೆಂಗಳೂರು : ಅಭಿಮಾನ್ ಸ್ಟುಡಿಯೋದಲ್ಲಿದ್ದ ಡಾ.ವಿಷ್ಣುವರ್ಧನ್ ಅವರ ಸಮಾಧಿ ಕೆಡುವಲಾಗಿತ್ತು. ಈ ವಿಚಾರವಾಗಿ ಇಂದು ಭಾರತಿ ವಿಷ್ಣುವರ್ಧನ್, ಅಳಿಯ ಅನಿರುದ್ಧ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಸಮಾಧಿ ನಿರ್ಮಾಣಕ್ಕಾಗಿ ಭೂಮಿ ನೀಡಿ ಎಂದು ಮನವಿ ಮಾಡಿದರು. ಅಲ್ಲದೇ ವಿಷ್ಣುವರ್ಧನ್ ಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಎಂದು ಸಹ ಮನವಿ ಮಾಡಿದರು. ಅದಕ್ಕೆ ಸಿಎಂ ಸಿದ್ದರಾಮಯ್ಯ ಸ್ಪಂದಿಸಿ ಈ ವಿಚಾರವಾಗಿ ನಾಳೆ ಕ್ಯಾಬಿನೆಟ್ ನಲ್ಲಿ ಚರ್ಚಿಸಲಾಗುತ್ತದೆ ಎಂದು ಭರವಸೆ ನೀಡಿದ್ದು, ಹಾಗಾಗಿ ನಾಳೆ ಅಧಿಕೃತವಾಗಿ ವಿಷ್ಣುವರ್ಧನ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಆಗುವ ಸಾಧ್ಯತೆ ಇದೆ.
ನಟ ಡಾ. ವಿಷ್ಣುವರ್ಧನ್ ಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಮಾಡುವ ಸಾಧ್ಯತೆಯಿದೆ ಎಂದು ಹೇಳಲಾಗಿದ್ದು, ನಾಳೆ ನಡೆಯುವ ಕ್ಯಾಬಿನೆಟ್ ಸಭೆಯಲ್ಲಿ ಅಧಿಕೃತ ಘೋಷಣೆಯಾಗಲಿದೆ.ನಿನ್ನೆ ಈ ವಿಚಾರವಾಗಿ ನಟ ಡಾ. ವಿಷ್ಣುವರ್ಧನ್ ಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಮಾಡುವಂತೆ ಕನ್ನಡ ಚಿತ್ರರಂಗದ ಹಿರಿಯ ನಟಿಯರಾದ ಜಯಮಾಲ, ಶ್ರುತಿ ಮತ್ತು ಮಾಳವಿಕ ಅವಿನಾಶ್ ಅವರು ಸಿಎಂ ಸಿದ್ದರಾಮಯ್ಯರನ್ನ ಭೇಟಿಯಾಗಿ ಮನವಿ ಸಲ್ಲಿಸಿದ್ದರು.ಇದಕ್ಕೆ ಸಿಎಂ ಕೂಡ ಸಕರಾತ್ಮವಾಗಿ ಸ್ಪಂದಿಸಿದ್ದು, ಪ್ರಶಸ್ತಿ ಘೋಷಣೆ ಬಗ್ಗೆ ಭರವಸೆ ನೀಡಿದ್ದಾರೆ. ನಾಳೆ ಕ್ಯಾಬಿನೆಟ್ ಸಭೆಯಲ್ಲಿ ಅಧಿಕೃತ ಘೋಷಣೆಯಾಗುವ ಸಾಧ್ಯತೆಯಿದೆ.
ಸಿಎಂ ಸಿದ್ದರಾಮಯ್ಯ ಟ್ವೀಟ್ ನಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿದ್ದು, ಕನ್ನಡ ಚಿತ್ರರಂಗದ ಹಿರಿಯ ನಟಿಯರಾದ ಜಯಮಾಲ, ಶ್ರುತಿ ಮತ್ತು ಮಾಳವಿಕ ಅವಿನಾಶ್ ಅವರು ಇಂದು ನನ್ನನ್ನು ಭೇಟಿಯಾಗಿ ದಿವಂಗತ ವಿಷ್ಣುವರ್ಧನ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಮನವಿ ಸಲ್ಲಿಸಿದರು. ಇದೇ ವೇಳೆ ಇತ್ತೀಚೆಗೆ ನಿಧನರಾದ ಪಂಚಭಾಷಾ ನಟಿ ಬಿ. ಸರೋಜಾದೇವಿ ಅವರ ಹೆಸರನ್ನು ಅವರು ವಾಸವಿದ್ದ ಮಲ್ಲೇಶ್ವರಂನ ರಸ್ತೆಗೆ ನಾಮಕರಣ ಮಾಡುವಂತೆಯೂ ಮನವಿ ಮಾಡಿದರು ಎಂದು ಟ್ವೀಟ್ ಮಾಡಿದ್ದಾರೆ.
https://twitter.com/siddaramaiah/status/1962852248813519258?t=wazC8RjsnkZsD5XEg2x5gQ&s=19