ಬೆಂಗಳೂರು : ಬೆಂಗಳೂರಿನಲ್ಲಿ ಹಾಲಿನ ಕಳ್ಳರ ಹಾವಳಿ ಹೆಚ್ಚಾಗಿದ್ದು, ಕನಕಪುರ ರಸ್ತೆಯಲ್ಲಿ ಬೈಕ್ ನಲ್ಲಿ ಬಂದು ಮುಂಜಾನೆ ಹಾಲು ಕಳ್ಳತನ ಮಾಡಿ ಖದೀಮರು ಪರಾರಿಯಾಗಿದ್ದಾರೆ.
ಹೌದು, ಬೆಂಗಳುರಿನ ಕನಕಪುರ ರಸ್ತೆಯಲ್ಲಿ ಹಾಲು ಕಳ್ಳರ ಹಾವಳಿ ಹೆಚ್ಚಾಗಿದ್ದು, ಹಾಲಿನ ಕ್ರೇಟ್ ಗಳನ್ನು ಖದೀಮರು ಕಳ್ಳತನ ಮಾಡಿ ಪರಾರಿಯಾಗಿದ್ದಾರೆ.
ಸುಬ್ರಹ್ಮಣ್ಯಪುರದಲ್ಲಿ ಮುಂಜಾನೆ 4 ಗಂಟೆ ಸುಮಾರಿಗೆ ಹಾಲು ಅನ್ ಲೋಡ್ ಆದ ಬಳಿಕ ಬೈಕ್ ನಲ್ಲಿ ಬರುವ ಖದೀಮರು ಹಾಲಿನ ಕ್ರೇಟ್ ಗಳನ್ನು ಕದ್ದು ಪರಾರಿಯಾಗಿದ್ದು, ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.