ಬೆಂಗಳೂರು : ಬಹುಭಾಷಾ ನಟ ಪ್ರಕಾಶ್ ರಾಜ್ಗೆ 2025 ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ ಮಾಡಲಾಗಿದೆ ಚಲನಚಿತ್ರ ಮತ್ತು ಕಿರುತೆರೆ ವಿಭಾಗದಲ್ಲಿ ಇಬ್ಬರಿಗೆ ರಾಜ್ಯ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ ಮಾಡಲಾಗಿದೆ ಪ್ರಕಾಶ್ ರಾಜ್ ಮತ್ತು ವಿಜಯಲಕ್ಷ್ಮಿ ಸಿಂಗಗೆ ರಾಜೋತ್ಸವ ಪ್ರಶಸ್ತಿ ಘೋಷಣೆ ಮಾಡಿದೆ.
ಬಹುಭಾಷ ನಟ ಪ್ರಕಾಶ್ ರಾಜ್, ವಿಜಯಲಕ್ಷ್ಮಿ ಸಿಂಗ್, IAS ಅಧಿಕಾರಿ ಸಿದ್ದಯ್ಯನವರಿಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಸಾಹಿತ್ಯ ಕ್ಷೇತ್ರದಲ್ಲಿ ರಾಜೇಂದ್ರ ಚೆನ್ನಿ, ತುಂಬಾಡಿ ರಾಮಯ್ಯ, ಪೌರಕಾರ್ಮಿಕರಾದ ಫಕೀರವ್ವಗೆ ರಾಜ್ಯ ಸರ್ಕಾರ 2025 ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ ಮಾಡಿದೆ.
ಇನ್ನು ಸಾಹಿತ್ಯ ಕ್ಷೇತ್ರದಲ್ಲಿ ಆರು ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಿಸಲಾಗಿದೆ ರಾಜೇಂದ್ರ ಚೆನ್ನಿ, ತುಂಬಾಡಿ ರಾಮಯ್ಯ, ಆರ್ ಸುನಂದಮ್ಮ, ಡಾ. ಎಚ್ ಎಲ್ ಪುಷ್ಪ, ರಹಮದ್ ತರೀಕೆರೆ ಹಾಗೂ ಹ.ಮ ಪೂಜಾರ್ ಅವರಿಗೆ ರಾಜೋತ್ಸವ ಪ್ರಶಸ್ತಿ ಘೋಷಿಸಲಾಗಿದೆ.








