ಚೆನ್ನೈ ಶನಿವಾರ ತಮಿಳುನಾಡಿನ ಕರೂರಿನಲ್ಲಿ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ವಿಜಯ್ ಅವರ ಪ್ರಚಾರ ರ್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮಕ್ಕಳು ಸೇರಿ 39 ಮಂದಿ ಸಾವನ್ನಪ್ಪಿದ್ದಾರೆ.
ಕರೂರ್ ಕಾಲ್ತುಳಿತ ದುರಂತದ ಬಗ್ಗೆ ಪ್ರತಿಕ್ರಿಯೆ ನೀಡಿರುವ ನಟ ರಜನಿಕಾಂತ್ ಅವರು, ಕರೂರಿನಲ್ಲಿ ನಡೆದ ಕಾಲ್ತುಳಿತದಲ್ಲಿ ಅಮಾಯಕರ ಜೀವಹಾನಿ ಸುದ್ದಿ ನನ್ನ ಹೃದಯವನ್ನು ಭಾರವಾಗಿಸಿದೆ. ನನಗೆ ತುಂಬಾ ದುಃಖವಾಗಿದೆ. ಮೃತರ ಕುಟುಂಬಗಳಿಗೆ ನನ್ನ ತೀವ್ರ ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಬೇಗನೆ ಚೇತರಿಸಿಕೊಳ್ಳಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ರಜನಿಕಾಂತ್ ಟ್ವೀಟ್ ಮಾಡಿದ್ದಾರೆ.
ಕಾಲ್ತುಳಿದಲ್ಲಿ ಇಲ್ಲಿಯವರೆಗೆ 39 ಜನರು ಸಾವನ್ನಪ್ಪಿದ್ದಾರೆ. ಪ್ರಸ್ತುತ, 51 ಜನರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತರ ಕುಟುಂಬಗಳಿಗೆ 10 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ತಮಿಳುನಾಡು ಸರ್ಕಾರ ಘೋಷಿಸಿದೆ.
கரூரில் நிகழ்ந்திருக்கும் அப்பாவி மக்களின் உயிரிழப்புச் செய்தி நெஞ்சை உலுக்கி மிகவும் வேதனையளிக்கிறது.
உயிரிழந்தோரின் குடும்பத்தினருக்கு என் ஆழ்ந்த அனுதாபங்கள். காயமடைந்தோருக்கு ஆறுதல்கள்.#Karur #Stampede
— Rajinikanth (@rajinikanth) September 27, 2025