ಮೈಸೂರು : ಕಳೆದ ಎರಡು ದಿನಗಳ ಹಿಂದೆ ಮೈಸೂರಲ್ಲಿ ಡ್ರಗ್ಸ್ ತಯಾರಿಕಾ ಘಟಕದ ಮೇಲೆ ಪೊಲೀಸರು ದಾಳಿ ನಡೆಸಿ ಬಹುದೊಡ್ಡ ಡ್ರಗ್ಸ್ ಜಾಲವನ್ನು ಭೇದಿಸಿದ್ದರು ಇದೀಗ ನೆನ್ನೆ ರಾತ್ರಿ ಕಮಿಷನರ್ ನೇತೃತ್ವದಲ್ಲಿ ನಗರದ ಹಲವೆಡೆ ದಾಳಿ ನಡೆಸಲಾಗಿದೆ. ಹೌದು ಮೈಸೂರು ನಗರದಲ್ಲಿ ಡ್ರೆಸ್ ತಯಾರಿಕಾ ಘಟಕ ಹಿನ್ನೆಲೆಯಲ್ಲಿ ಅಲರ್ಟ್ ಆಗಿದ್ದು ಮೈಸೂರು ನಗರ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ.
ಮೈಸೂರು ನಗರದಾದ್ಯಂತ ಪೊಲೀಸರಿಂದ ಕಾರ್ಯಾಚರಣೆ ಮುಂದುವರೆದಿದ್ದು, ನಿನ್ನೆ ರಾತ್ರಿ ಮೈಸೂರು ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ನೇತೃತ್ವದಲ್ಲಿ ರೇಡ್ ನಡೆಸಲಾಗಿದೆ. ಮೈಸೂರು ನಗರದ ಮಂಡಿ ಮೊಹಲ್ಲ, ಉದಯಗಿರಿ, ಎನ್ ಆರ್ ಮೊಹಲ್ಲಾ, ನಜರ್ ಬಾದ್, ಕೆ ಆರ್ ಮೊಹಲ್ಲಾ ಸೇರಿದಂತೆ ಹಲವು ಕಡೆ ಏಕಕಾಲದಲ್ಲಿ ದಾಳಿ ಮಾಡಿದ್ದಾರೆ. ಡಿಸಿಪಿಗಳು ಎಸಿಪಿಗಳು ಇನ್ಸ್ಪೆಕ್ಟರ್ಗಳ ನೇತೃತ್ವದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ.ಗಾಂಜಾ ಡ್ರಗ್ಸ್ ಮಾರಾಟ ಮಾಡುವವರನ್ನು ಗಡಿ ಪಾಡುವ ಮಾಡುವುದಾಗಿ ಕಮಿಷನರ್ ಸೀಮಾ ಲಾಟ್ಕರ್ ಎಚ್ಚರಿಕೆ ನೀಡಿದ್ದಾರೆ.