ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇತ್ತೀಚಿಗೆ ನಟ ದರ್ಶನ್ ಅವರು ಡೆವಿಲ್ ಸಿನಿಮಾ ಶೂಟಿಂಗ್ ಗೆ ವಿದೇಶಕ್ಕೆ ತೆರಳಲು ಅನುಮತಿ ಕೋರಿ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯವು ನಟ ದರ್ಶನ ಅವರಿಗೆ ವಿದೇಶಕ್ಕೆ ತೆರಳಲು ಅನುಮತಿ ನೀಡಿದೆ.
ಹೌದು ಡೆವಿಲ್ ಸಿನಿಮಾ ಶೂಟಿಂಗಿಗೆ ವಿದೇಶಕ್ಕೆ ತೆರಳಲು ಅನುಮತಿ ನೀಡುವಂತೆ ಕೋರಿ ನಟ ದರ್ಶನ್ ಕಳೆದ ಎರಡು ದಿನಗಳ ಹಿಂದೆ ಅರ್ಜಿ ಸಲ್ಲಿಸಿದ್ದರು ಇಂದು ವಿಚಾರಣೆ ನಡೆಸಿದ ಕೋರ್ಟ್ ಜುಲೈ 1 ರಿಂದ ಜುಲೈ 27 ರವರೆಗೆ ತೆರಳಲು ಅನುಮತಿ ನೀಡಿದ್ದು, ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯದಿಂದ ಅನುಮತಿ ದೊರಕಿದೆ. ಮುಂದಿನ ವಿಚಾರಣೆಯಂದು ತಪ್ಪದೆ ಹಾಜರಾಗಬೇಕು ಎಂದು ಷರತ್ತು ವಿಧಿಸಿದೆ.








