ಬಳ್ಳಾರಿ : ಬಳ್ಳಾರಿಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಬಾಣಂತಿಯರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ಘೋಷಿಸಲಾಗಿದ್ದು, ಇದೀಗ ಮತ್ತೆ 3 ಲಕ್ಷ ಪರಿಹಾರ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಬಾಣಂತಿಯರ ಕುಟುಂಬಕ್ಕೆ ಈಗಾಗಲೇ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ. ಇದೀಗ ಮತ್ತೆ 3 ಲಕ್ಷ ರೂ.ಸೇರಿಸಿ ಒಟ್ಟು 5 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಐವರು ಬಾಣಂತಿತರು ಸಾವನ್ನಪ್ಪಿದ್ದರು. ಘಟನೆ ಬೆನ್ನಲ್ಲೇ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಮೃತ ಬಾಣಂತಿಯರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿತ್ತು. ಇದೀಗ ಈ ಪರಿಹಾರ ಮೊತ್ತವನ್ನು 3 ಲಕ್ಷ ಹೆಚ್ಚು ನೀಡಲಾಗುವುದು ಸಚಿವ ಜಮೀರ್ ಅಹ್ಮದ್ ಘೋಷಿಸಿದ್ದಾರೆ.